ರಾಯಚೂರು

ಸಿರವಾರ ತಾಲೂಕಿನಲ್ಲಿ ಬೆಳೆ ವಿಮೆ ಪರಿಹಾರಕ್ಕೆ ಶೀಘ್ರದಲ್ಲಿ ಜಿಪಿಎಸ್ ಸಮೀಕ್ಷೆಗೆ ಮಲ್ಲಿಕಾರ್ಜುನ ಜಕ್ಕಲದಿನ್ನಿ ಆಗ್ರಹ

​ಸಿರವಾರ: ಮುಂಗಾರು ಮಳೆಯ ವೈಫಲ್ಯ ಹಾಗೂ ಕಾಲುವೆಗಳಿಗೆ ನೀರು ಹರಿಯದೇ ಇರುವುದರಿಂದ ಸಿರವಾರ ಮತ್ತು ಮಾನ್ವಿ ತಾಲೂಕುಗಳಲ್ಲಿ ಹತ್ತಿ, ಭತ್ತ, ತೊಗರಿ ಸೇರಿದಂತೆ ಪ್ರಮುಖ ಬೆಳೆಗಳು ಸಂಪೂರ್ಣ ಒಣಗಿ ನಾಶವಾಗುತ್ತಿವೆ. ಸಾಲ ಸೋಲ ಮಾಡಿ ಬೆಳೆದ ಪೈರು ಕಣ್ಣೆದುರೇ ಒಣಗುತ್ತಿರುವುದನ್ನು ನೋಡಲಾಗದ ರೈತರು, ಭೂಮಿಯನ್ನು ಹದಗೊಳಿಸಿ ಪರ್ಯಾಯ ಬೆಳೆ ಬೆಳೆಯಲು ಒಣಗಿದ ಪೈರುಗಳನ್ನು ತೆರವುಗೊಳಿಸುತ್ತಿದ್ದಾರೆ.
​ರೈತರು ಜಮೀನುಗಳನ್ನು ಖಾಲಿ ಮಾಡುವ ಮುನ್ನವೇ ಕೃಷಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ತುರ್ತಾಗಿ ಸ್ಥಳಕ್ಕೆ ಭೇಟಿ ನೀಡಿ ಜಿಪಿಎಸ್ (GPS) ಆಧಾರಿತ ಸಮೀಕ್ಷೆ ನಡೆಸಬೇಕು ಎಂದು ಬಿಜೆಪಿ ರಾಯಚೂರು ಜಿಲ್ಲಾ ಉಪಾಧ್ಯಕ್ಷ ಮಲ್ಲಿಕಾರ್ಜುನ ಜಕ್ಕಲದಿನ್ನಿ ಒತ್ತಾಯಿಸಿದ್ದಾರೆ.

​ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ವಿಮೆ ಕಂತು ಪಾವತಿಸಿರುವ ರೈತರ ಜಮೀನುಗಳಲ್ಲಿ ತೆರವು ಕಾರ್ಯಕ್ಕೂ ಮುನ್ನವೇ ತುರ್ತಾಗಿ ನೈಜ ಹಾನಿಯನ್ನು ದಾಖಲಿಸಬೇಕು. ನಂತರ ಸಮೀಕ್ಷೆ ನಡೆಸಿದರೆ ರೈತರಿಗೆ ವಿಮೆ ನಷ್ಟವಾಗುವ ಭೀತಿಯಿದೆ.

​ಸಿರವಾರ ತಾಲೂಕಿನಾದ್ಯಂತ ನೀರಾವರಿ ಹಾಗೂ ಮಳೆಯಾಶ್ರಿತ ಪ್ರದೇಶಗಳ ನೈಜ ಪರಿಸ್ಥಿತಿಯ ವರದಿ ಸಿದ್ಧಪಡಿಸಿ, ತಾಲೂಕನ್ನು ಕೂಡಲೇ ‘ಬರಪೀಡಿತ’ ಎಂದು ಸರ್ಕಾರ ಘೋಷಿಸಬೇಕು.

​ಬೆಳೆ ಹಾನಿಗೊಳಗಾದ ಅರ್ಹ ರೈತರಿಗೆ ವಿಮಾ ಕಂಪನಿಗಳಿಂದ ವಿಮಾ ಪರಿಹಾರ ಹಾಗೂ ಸರ್ಕಾರದಿಂದ ಬರ ಪರಿಹಾರದ ಹಣವನ್ನು ವಿಳಂಬವಿಲ್ಲದೆ ತಲುಪಿಸಬೇಕು.
​ಬೆಳೆ ನಷ್ಟದಿಂದ ಅನ್ನದಾತ ತೀವ್ರ ಸಂಕಷ್ಟದಲ್ಲಿದ್ದು, ಜಿಲ್ಲಾಡಳಿತ ಮತ್ತು ಸರ್ಕಾರ ತಕ್ಷಣವೇ ಸ್ಪಂದಿಸಿ ರೈತರ ನೆರವಿಗೆ ಧಾವಿಸಬೇಕೆಂದು ಅವರು ಆಗ್ರಹಿಸಿದ್ದಾರೆ.

projectededore

Recent Posts

‘ಪ್ರೇರಣಾ’ – ವಿ. ಎಸ್. ಕಾಂತನವರ ಹಿಂದಿ ಕಾವ್ಯ ಸುಮಗುಚ್ಛ

ಲೇಖಕರು - ಶ್ರೀಮತಿ ಡಿ. ಕೋಮಲ, ರಾಯಚೂರು ಗುರುಶ್ರೀ ವಿ. ಎಸ್. ಕಾಂತನವರ ಅವರು ಕನ್ನಡ ಮತ್ತು ಹಿಂದಿ ಎರಡೂ…

3 weeks ago

ಶಾಸಕ ಬಸನಗೌಡ ದದ್ದಲ್‌ರಿಂದ ವಿಶ್ವವಿದ್ಯಾಲಯದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ರಾಯಚೂರು: ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ ವೇಳೆ ಅಧಿಕಾರಿಗಳೊಂದಿಗೆ ವಿಶ್ವವಿದ್ಯಾಲಯದಲ್ಲಿ ಪ್ರಗತಿಯಲ್ಲಿರುವ ವಿವಿಧ ಪ್ರಮುಖ ಅಭಿವೃದ್ಧಿ…

3 weeks ago

ಮಟಮಾರಿಯಲ್ಲಿ ₹3 ಕೋಟಿ ರಸ್ತೆ ಕಾಮಗಾರಿಗೆ ಭೂಮಿಪೂಜೆ; ಕುರ್ಡಿಯಲ್ಲಿ ₹25 ಲಕ್ಷದ ಸಮುದಾಯ ಭವನ ಉದ್ಘಾಟನೆ

ರಾಯಚೂರು: ರಾಯಚೂರು ಗ್ರಾಮೀಣ ಕ್ಷೇತ್ರದ ಮಟಮಾರಿ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (KKRDB) ಮ್ಯಾಕ್ರೋ ಯೋಜನೆಯಡಿ ₹3…

3 weeks ago

ಸತೀಶ್ ಜಾರಕಿಹೊಳಿ ಮೇಲಿನ ED ದಾಳಿ ಖಂಡಿಸಿ ಸಿರವಾರದಲ್ಲಿ ಪಂಜಿನ ಮೆರವಣಿಗೆ

ಸಿರವಾರ: ಸಚಿವ ಸತೀಶ ಜಾರಕಿಹೊಳಿ ಅವರ ಮೇಲೆ ಕೇಂದ್ರ ಸರ್ಕಾರ ರಾಜಕೀಯ ಪ್ರೇರಿತವಾಗಿ ED ದಾಳಿ ನಡೆಸಿದೆ ಎಂದು ಆರೋಪಿಸಿ,…

3 weeks ago

ರಾಯಚೂರಿನಲ್ಲಿ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ

ರಾಯಚೂರು: ನಗರದ ಪೋತಗಲ್ ರಸ್ತೆಯ ಮನೆಯೊಂದರಲ್ಲಿ ಆಟವಾಡುತ್ತಿದ್ದ ಮೂರು ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ ನಡೆಸಿದ ಘಟನೆ…

3 weeks ago

ವಾರ್ಡ್ ನಂ.22ರ ಮನೆ-ಮನೆಗೆ ಭೇಟಿ: ನಿವಾಸಿಗಳ ಸಮಸ್ಯೆ ಆಲಿಸಿದ ರಾಮನಗೌಡ ಏಗನೂರು

ರಾಯಚೂರು: ನಗರದ ವಾರ್ಡ್ ನಂ.22ರಲ್ಲಿ ಜೆಡಿಎಸ್ ಮುಖಂಡ ರಾಮನಗೌಡ ಏಗನೂರು ಅವರು ಭಾನುವಾರ ಮನೆ-ಮನೆಗೆ ಭೇಟಿ ನೀಡಿ ನಿವಾಸಿಗಳ ಸಮಸ್ಯೆಗಳನ್ನು…

3 weeks ago