ಸಿರವಾರ: ಗಣೇಶೋತ್ಸವ ಸಂಭ್ರಮದಲ್ಲಿದ್ದ ಪಟ್ಟಣದ ಯುವಕರ ಬಳಗದಲ್ಲಿ ಶೋಕದ ಛಾಯೆ ಆವರಿಸಿದೆ. ಶುಕ್ರವಾರ ಬೆಳಗಿನ ಜಾವಾ ಹೈದರಾಬಾದ್‌ನಿಂದ ಗಣೇಶನ ಮೂರ್ತಿಯನ್ನು ತರುತ್ತಿದ್ದಾಗ ವಿದ್ಯುತ್ ಲೈನ್ ಗೆ ಸಿಲುಕಿ ತಂತಿ ತುಂಡಾಗಿ ಬಿದ್ದ ಪರಿಣಾಮ ಯುವಕನೊಬ್ಬ ಪ್ರಾಣ ಕಳೆದುಕೊಂಡ ಭೀಕರ ಘಟನೆ ಸಿರವಾರ ತಾಲೂಕಿನ ಅತ್ತನೂರು ಗ್ರಾಮದ ಬಳಿ ಶುಕ್ರವಾರ ಬೆಳಗಿನ ಜಾವ ಸಂಭವಿಸಿದೆ.
ಸಿರವಾರ ಪಟ್ಟಣದ ವಿದ್ಯಾನಗರ ನಿವಾಸಿ ಪ್ರೇಮ ಸುಂದರ (26)ಮೃತಪಟ್ಟ ದುರ್ದೈವಿ.
ಸಂಭವಿಸಿದ್ದು ಹೇಗೆ?
ಹೈದರಾಬಾದ್‌ನಿಂದ ಸಿರವಾರ ಪಟ್ಟಣಕ್ಕೆ ವಾಹನದಲ್ಲಿ ಗಣೇಶನ ಮೂರ್ತಿಯನ್ನು ತರಲಾಗುತ್ತಿತ್ತು. ಅತ್ತನೂರು ಗ್ರಾಮ ತಲುಪುತ್ತಿದ್ದಂತೆ ಮಾರ್ಗ ಮಧ್ಯೆ ಹಾದುಹೋಗಿದ್ದ ಮೇಲ್ಭಾಗದ ವಿದ್ಯುತ್ ಲೈನ್‌ಗೆ ಗಣೇಶ ವಿಗ್ರಹ ಸಿಲುಕಿಕೊಂಡಿದೆ. ಈ ರಭಸಕ್ಕೆ ವಿದ್ಯುತ್ ತಂತಿ ತುಂಡಾಗಿ ವಾಹನದಲ್ಲಿದ್ದ ಪ್ರೇಮ್ ಅವರ ಮೇಲೆ ಬಿದ್ದಿದೆ.
ವಿದ್ಯುತ್ ಸ್ಪರ್ಶದಿಂದ ಗಂಭೀರವಾಗಿ ಗಾಯಗೊಂಡ ಪ್ರೇಮ್ ಅವರನ್ನು ತಕ್ಷಣವೇ ಸ್ನೇಹಿತರು ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಿದರಾದರೂ, ಮಾರ್ಗಮಧ್ಯದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ.
ಘಟನಾ ಸ್ಥಳಕ್ಕೆ ಸಿರವಾರ ಸಿಪಿಐ ಶಶಿಕಾಂತ ಎಂ. ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಲೇಖಕರು - ಶ್ರೀಮತಿ ಡಿ. ಕೋಮಲ, ರಾಯಚೂರು ಗುರುಶ್ರೀ ವಿ. ಎಸ್. ಕಾಂತನವರ ಅವರು ಕನ್ನಡ ಮತ್ತು ಹಿಂದಿ ಎರಡೂ…
ರಾಯಚೂರು: ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ ವೇಳೆ ಅಧಿಕಾರಿಗಳೊಂದಿಗೆ ವಿಶ್ವವಿದ್ಯಾಲಯದಲ್ಲಿ ಪ್ರಗತಿಯಲ್ಲಿರುವ ವಿವಿಧ ಪ್ರಮುಖ ಅಭಿವೃದ್ಧಿ…
ರಾಯಚೂರು: ರಾಯಚೂರು ಗ್ರಾಮೀಣ ಕ್ಷೇತ್ರದ ಮಟಮಾರಿ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (KKRDB) ಮ್ಯಾಕ್ರೋ ಯೋಜನೆಯಡಿ ₹3…
ಸಿರವಾರ: ಸಚಿವ ಸತೀಶ ಜಾರಕಿಹೊಳಿ ಅವರ ಮೇಲೆ ಕೇಂದ್ರ ಸರ್ಕಾರ ರಾಜಕೀಯ ಪ್ರೇರಿತವಾಗಿ ED ದಾಳಿ ನಡೆಸಿದೆ ಎಂದು ಆರೋಪಿಸಿ,…
ರಾಯಚೂರು: ನಗರದ ಪೋತಗಲ್ ರಸ್ತೆಯ ಮನೆಯೊಂದರಲ್ಲಿ ಆಟವಾಡುತ್ತಿದ್ದ ಮೂರು ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ ನಡೆಸಿದ ಘಟನೆ…
ರಾಯಚೂರು: ನಗರದ ವಾರ್ಡ್ ನಂ.22ರಲ್ಲಿ ಜೆಡಿಎಸ್ ಮುಖಂಡ ರಾಮನಗೌಡ ಏಗನೂರು ಅವರು ಭಾನುವಾರ ಮನೆ-ಮನೆಗೆ ಭೇಟಿ ನೀಡಿ ನಿವಾಸಿಗಳ ಸಮಸ್ಯೆಗಳನ್ನು…