ಸಿರವಾರ: ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಸಿರವಾರ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಭರ್ಜರಿ ಸಾಧನೆ ಮಾಡಿದೆ.

ಕಬಡ್ಡಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದು, ವಾಲಿಬಾಲ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದೆ.

ತಾಲೂಕಿನ ವಿವಿಧ ಕಾಲೇಜುಗಳ ತಂಡಗಳ ನಡುವೆ ನಡೆದ ಪೈಪೋಟಿಯಲ್ಲಿ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ತಂಡ ಪ್ರದರ್ಶನ ನೀಡಿ ಗೆಲುವು ಸಾಧಿಸಿದರು. ಕಬಡ್ಡಿ ತಂಡದ ಆಕ್ರಮಣಕಾರಿ ಆಟ ಹಾಗೂ ಸಮರ್ಥ ರಕ್ಷಣಾ ತಂತ್ರ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು.

ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಪ್ರಾಚಾರ್ಯ ಹನುಮಂತ ಚನ್ನೂರು, ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಎಲ್ಲ ಉಪನ್ಯಾಸಕ ವೃಂದ ಹರ್ಷ ವ್ಯಕ್ತಪಡಿಸಿ, ಜಿಲ್ಲಾ ಮಟ್ಟದಲ್ಲೂ ಉತ್ತಮ ಪ್ರದರ್ಶನ ನೀಡುವಂತೆ ಶುಭ ಹಾರೈಸಿದ್ದಾರೆ.

Previous articleಬರ ಪರಿಹಾರಕ್ಕೆ ಆಗ್ರಹ: AIKKMS ನಿಂದ ತಹಶೀಲ್ದಾರ್‌ಗೆ ಮನವಿ
Next articleಕೆ.ಗುಡದಿನ್ನಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ: ಭಾವಚಿತ್ರ ಮೆರವಣಿಗೆ