ಸಿರವಾರ: ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳಲ್ಲಿ ಉತ್ತಮ ಆಡಳಿತದ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಮೈಸೂರಿನ ರಾಜ್ಯ ನಗರಾಭಿವೃದ್ಧಿ ಸಂಸ್ಥೆ (SIUD) ವತಿಯಿಂದ ಆಯೋಜಿಸಿರುವ “ERP in Convergence with Administration Staff for Good Governance” ಎರಡು ದಿನಗಳ ತರಬೇತಿ ಕಾರ್ಯಕ್ರಮಕ್ಕೆ ಸಿರವಾರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಜಿ ಚೌದ್ರಿ, ಉಪಾಧ್ಯಕ್ಷೆ ಲಕ್ಷ್ಮಿ ಆದೆಪ್ಪ ನಾಯಕ ಸೇರಿದಂತೆ ಪಟ್ಟಣ ಪಂಚಾಯಿತಿ ಸದಸ್ಯರು ತೆರಳಿದರು.
ಮೈಸೂರಿನ ಎಟಿಐ ಕ್ಯಾಂಪಸ್‌ನಲ್ಲಿರುವ ರಾಜ್ಯ ನಗರಾಭಿವೃದ್ಧಿ ಸಂಸ್ಥೆಯಲ್ಲಿ ಸೆಪ್ಟೆಂಬರ್ 8 ಮತ್ತು 9ರಂದು ತರಬೇತಿ ಕಾರ್ಯಕ್ರಮ ನಡೆಯಲಿದೆ. ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಪೌರಸೇವಕರು ಹಾಗೂ ಅಧಿಕಾರಿಗಳಿಗೆ ಉತ್ತಮ ಆಡಳಿತ, ಆಡಳಿತಾತ್ಮಕ ವ್ಯವಸ್ಥೆ ಮತ್ತು ವಿವಿಧ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸುವ ಕುರಿತು ತರಬೇತಿ ನೀಡಲಾಗುತ್ತದೆ.
ತರಬೇತಿ ಕಾರ್ಯಕ್ರಮದಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಕಾರ್ಯವೈಖರಿ, ಆಡಳಿತದಲ್ಲಿ ತಂತ್ರಜ್ಞಾನದ ಬಳಕೆ, ವಿವಿಧ ಯೋಜನೆಗಳ ಅನುಷ್ಠಾನ ಹಾಗೂ ಜನರಿಗೆ ಪರಿಣಾಮಕಾರಿ ಸೇವೆ ಒದಗಿಸುವ ಕುರಿತು ಮಾಹಿತಿ ಮತ್ತು ಮಾರ್ಗದರ್ಶನ ನೀಡಲಾಗುತ್ತದೆ.
ಈ ತರಬೇತಿಯಲ್ಲಿ ಭಾಗವಹಿಸುವ ಮೂಲಕ ಸಿರವಾರ ಪಟ್ಟಣ ಪಂಚಾಯಿತಿಯ ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ರೂಪಿಸಲು ಹಾಗೂ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಲು ಅಗತ್ಯವಾದ ಜ್ಞಾನ ಮತ್ತು ಮಾರ್ಗದರ್ಶನ ಪಡೆಯಲು ಸಾಧ್ಯವಾಗಲಿದೆ ಎಂದು ಪಟ್ಟಣ ಪಂಚಾಯಿತಿ ಪ್ರತಿನಿಧಿಗಳು ತಿಳಿಸಿದ್ದಾರೆ.
ಲೇಖಕರು - ಶ್ರೀಮತಿ ಡಿ. ಕೋಮಲ, ರಾಯಚೂರು ಗುರುಶ್ರೀ ವಿ. ಎಸ್. ಕಾಂತನವರ ಅವರು ಕನ್ನಡ ಮತ್ತು ಹಿಂದಿ ಎರಡೂ…
ರಾಯಚೂರು: ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ ವೇಳೆ ಅಧಿಕಾರಿಗಳೊಂದಿಗೆ ವಿಶ್ವವಿದ್ಯಾಲಯದಲ್ಲಿ ಪ್ರಗತಿಯಲ್ಲಿರುವ ವಿವಿಧ ಪ್ರಮುಖ ಅಭಿವೃದ್ಧಿ…
ರಾಯಚೂರು: ರಾಯಚೂರು ಗ್ರಾಮೀಣ ಕ್ಷೇತ್ರದ ಮಟಮಾರಿ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (KKRDB) ಮ್ಯಾಕ್ರೋ ಯೋಜನೆಯಡಿ ₹3…
ಸಿರವಾರ: ಸಚಿವ ಸತೀಶ ಜಾರಕಿಹೊಳಿ ಅವರ ಮೇಲೆ ಕೇಂದ್ರ ಸರ್ಕಾರ ರಾಜಕೀಯ ಪ್ರೇರಿತವಾಗಿ ED ದಾಳಿ ನಡೆಸಿದೆ ಎಂದು ಆರೋಪಿಸಿ,…
ರಾಯಚೂರು: ನಗರದ ಪೋತಗಲ್ ರಸ್ತೆಯ ಮನೆಯೊಂದರಲ್ಲಿ ಆಟವಾಡುತ್ತಿದ್ದ ಮೂರು ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ ನಡೆಸಿದ ಘಟನೆ…
ರಾಯಚೂರು: ನಗರದ ವಾರ್ಡ್ ನಂ.22ರಲ್ಲಿ ಜೆಡಿಎಸ್ ಮುಖಂಡ ರಾಮನಗೌಡ ಏಗನೂರು ಅವರು ಭಾನುವಾರ ಮನೆ-ಮನೆಗೆ ಭೇಟಿ ನೀಡಿ ನಿವಾಸಿಗಳ ಸಮಸ್ಯೆಗಳನ್ನು…