ರಾಯಚೂರು: ಇತ್ತೀಚಿನ ದಿನಗಳಲ್ಲಿ ವಿವಿಧ ಕಂಪನಿಗಳ ಹಲವು ವಾಹನಗಳು ಮಾರುಕಟ್ಟೆಗೆ ಬರುತ್ತಿದ್ದು, ರಸ್ತೆ ಹಿಡಿತ, ಸುರಕ್ಷತೆ ಹಾಗೂ ದೂರ ಪ್ರಯಾಣದಲ್ಲಿ ಸುಖಕರ ಅನುಭವ ನೀಡುವಲ್ಲಿ ಟೊಯೋಟಾ ವಾಹನಗಳು ಸಹಕಾರಿಯಾಗಿವೆ ಎಂದು ಹಟ್ಟಿ ಚಿನ್ನದ ಗಣಿಯ ಮಾಜಿ ಅಧ್ಯಕ್ಷ ಗಿರಿಜಾ ಶಂಕರ್ ಹೇಳಿದರು.
ನಗರದ ಒಪೆಕ್ ಆಸ್ಪತ್ರೆ ರಸ್ತೆಯಲ್ಲಿರುವ ಕರುಣಾ ಟೊಯೋಟಾ ಶೋರೂಮ್‌ನಲ್ಲಿ ಭಾನುವಾರ ಸಂಜೆ 6 ಗಂಟೆಗೆ ಆಯೋಜಿಸಿದ್ದ ಹೊಸ ಟೊಯೋಟಾ ಅರ್ಬನ್ ಕ್ರೂಸರ್ ಎಬೆಲ್ಲಾ ಎಲೆಕ್ಟ್ರಿಕ್ SUV ವಾಹನದ ಬಿಡುಗಡೆ ಕಾರ್ಯಕ್ರಮದಲ್ಲಿ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಟೊಯೋಟಾ ವಾಹನಗಳು ಇದುವರೆಗೆ ಡೀಸೆಲ್ ಮತ್ತು ಪೆಟ್ರೋಲ್ ಮಾದರಿಗಳಲ್ಲಿದ್ದವು. ಇದೀಗ ಎಲೆಕ್ಟ್ರಿಕ್ ವಾಹನವನ್ನು ಬಿಡುಗಡೆ ಮಾಡಿರುವುದರಿಂದ ಸಾಕಷ್ಟು ಜನರಿಗೆ ಇದರ ಪ್ರಯೋಜನವಾಗಲಿದೆ. ವಾಹನಗಳ ಪ್ರಯಾಣದ ಸುರಕ್ಷತೆಯ ಇನ್ನೊಂದು ಹೆಸರೇ ಟೊಯೋಟಾ ಎಂದು ಹೇಳಿದ ಅವರು, ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದ ಮತ್ತೊಬ್ಬ ಮುಖ್ಯ ಅತಿಥಿ ಹಾಗೂ RIMSನ ಡಾ. ವಿಜಯಶಂಕರ್ ಮಾತನಾಡಿ, ತಾವು ವಾಹನ ಚಾಲನೆ ಆರಂಭಿಸಿದಾಗಿನಿಂದಲೂ ಟೊಯೋಟಾ ಕಂಪನಿಯ ವಾಹನಗಳನ್ನೇ ಬಳಸುತ್ತಿರುವುದಾಗಿ ತಿಳಿಸಿದರು.
ಕುಟುಂಬದೊಂದಿಗೆ ಎಲ್ಲಿಯಾದರೂ ಪ್ರಯಾಣಿಸಿದಾಗ ಸುರಕ್ಷಿತವಾಗಿ ತಲುಪುವ ಭರವಸೆಯನ್ನು ಟೊಯೋಟಾ ವಾಹನಗಳು ನೀಡುತ್ತವೆ. ಇದೀಗ ಎಲೆಕ್ಟ್ರಿಕ್ ವಾಹನ ಬಿಡುಗಡೆಯಾಗಿರುವುದರಿಂದ ಪೆಟ್ರೋಲ್ ಮತ್ತು ಡೀಸೆಲ್‌ನ ಆರ್ಥಿಕ ಹೊರೆಯನ್ನು ಕಡಿಮೆ ಮಾಡಿಕೊಳ್ಳಲು ಸಹಕಾರಿಯಾಗಬಹುದು. ಪರಿಸರ ಸಂರಕ್ಷಣೆಯ ಜೊತೆಗೆ ಸುರಕ್ಷಿತ ಹಾಗೂ ಆರ್ಥಿಕ ಪ್ರಯಾಣಕ್ಕೂ ಇದು ನೆರವಾಗಲಿದೆ ಎಂದು ಹೇಳಿದರು.
ಶೋರೂಮ್‌ನ AGM ಮೊಮ್ಮದ್ ಗೌಸ್ ಪ್ರಾಸ್ತಾವಿಕವಾಗಿ ಮಾತನಾಡಿ, ಟೊಯೋಟಾ ಅರ್ಬನ್ ಕ್ರೂಸರ್ ಎಬೆಲ್ಲಾ EV ವಾಹನವು 61 kWh ಬ್ಯಾಟರಿ ಹೊಂದಿದ್ದು, ಒಂದು ಬಾರಿ ಫುಲ್ ಚಾರ್ಜ್ ಮಾಡಿದರೆ 543 ಕಿ.ಮೀ.ವರೆಗೆ ಸಂಚರಿಸಬಹುದಾಗಿದೆ ಎಂದು ತಿಳಿಸಿದರು.
174 PS ಶಕ್ತಿಶಾಲಿ ಮೋಟಾರ್, 189 Nm ಟಾರ್ಕ್, ಉತ್ತಮ ಪರ್ಫಾರ್ಮೆನ್ಸ್ ಮತ್ತು ಪಿಕಪ್, ಎಲೆಕ್ಟ್ರಿಕ್ ಮೋಟಾರ್‌ನಿಂದ ತಕ್ಷಣದ ವೇಗವರ್ಧನೆ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ವಾಹನ ಹೊಂದಿದೆ. ಜೊತೆಗೆ 7 ಏರ್‌ಬ್ಯಾಗ್‌ಗಳು, 360 ಡಿಗ್ರಿ ಕ್ಯಾಮೆರಾ, ಸುಲಭ ಪಾರ್ಕಿಂಗ್ ವ್ಯವಸ್ಥೆ ಹಾಗೂ ಪ್ರೀಮಿಯಂ JBL ಆಡಿಯೋ ಸಿಸ್ಟಮ್ ಸೇರಿದಂತೆ ಹಲವು ಸೌಲಭ್ಯಗಳನ್ನು ಹೊಂದಿದೆ ಎಂದು ವಿವರಿಸಿದರು.
ಈ ಸಂದರ್ಭದಲ್ಲಿ ಟೊಯೋಟಾ ಕಂಪನಿಯ ಕಾರ್ಯನಿರ್ವಾಹಕ ಅಧಿಕಾರಿ ಫ್ರಾನ್ಸಿಸ್ ಕೆ.ಎಸ್., ಮುಖ್ಯ ಅತಿಥಿಗಳಾದ ಪಶ್ಚಿಮ ಪೊಲೀಸ್ ಠಾಣೆಯ ಪಿಎಸ್‌ಐ ಮಂಜುನಾಥ್, ವಕೀಲ ಯುವರಾಜ್ ಹಾಗೂ ಕರುಣಾ ಟೊಯೋಟಾ ಶೋರೂಮ್‌ನ ಸಿಬ್ಬಂದಿ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಆರಂಭದಲ್ಲಿ ಕುಮಾರಿ ಸವಿತಾ ರೆಡ್ಡಿ ಸ್ವಾಗತಿಸಿದರು. ಎಂ. ಸಂದೀಪ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಅಂಕಿತ ಅವರ ವಂದನಾರ್ಪಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು. ಟೊಯೋಟಾ ವಾಹನಗಳ ಮಾಲೀಕರು, ಚಾಲಕರು ಹಾಗೂ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಲೇಖಕರು - ಶ್ರೀಮತಿ ಡಿ. ಕೋಮಲ, ರಾಯಚೂರು ಗುರುಶ್ರೀ ವಿ. ಎಸ್. ಕಾಂತನವರ ಅವರು ಕನ್ನಡ ಮತ್ತು ಹಿಂದಿ ಎರಡೂ…
ರಾಯಚೂರು: ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ ವೇಳೆ ಅಧಿಕಾರಿಗಳೊಂದಿಗೆ ವಿಶ್ವವಿದ್ಯಾಲಯದಲ್ಲಿ ಪ್ರಗತಿಯಲ್ಲಿರುವ ವಿವಿಧ ಪ್ರಮುಖ ಅಭಿವೃದ್ಧಿ…
ರಾಯಚೂರು: ರಾಯಚೂರು ಗ್ರಾಮೀಣ ಕ್ಷೇತ್ರದ ಮಟಮಾರಿ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (KKRDB) ಮ್ಯಾಕ್ರೋ ಯೋಜನೆಯಡಿ ₹3…
ಸಿರವಾರ: ಸಚಿವ ಸತೀಶ ಜಾರಕಿಹೊಳಿ ಅವರ ಮೇಲೆ ಕೇಂದ್ರ ಸರ್ಕಾರ ರಾಜಕೀಯ ಪ್ರೇರಿತವಾಗಿ ED ದಾಳಿ ನಡೆಸಿದೆ ಎಂದು ಆರೋಪಿಸಿ,…
ರಾಯಚೂರು: ನಗರದ ಪೋತಗಲ್ ರಸ್ತೆಯ ಮನೆಯೊಂದರಲ್ಲಿ ಆಟವಾಡುತ್ತಿದ್ದ ಮೂರು ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ ನಡೆಸಿದ ಘಟನೆ…
ರಾಯಚೂರು: ನಗರದ ವಾರ್ಡ್ ನಂ.22ರಲ್ಲಿ ಜೆಡಿಎಸ್ ಮುಖಂಡ ರಾಮನಗೌಡ ಏಗನೂರು ಅವರು ಭಾನುವಾರ ಮನೆ-ಮನೆಗೆ ಭೇಟಿ ನೀಡಿ ನಿವಾಸಿಗಳ ಸಮಸ್ಯೆಗಳನ್ನು…