ರಾಯಚೂರು: ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ ವೇಳೆ ಅಧಿಕಾರಿಗಳೊಂದಿಗೆ ವಿಶ್ವವಿದ್ಯಾಲಯದಲ್ಲಿ ಪ್ರಗತಿಯಲ್ಲಿರುವ ವಿವಿಧ ಪ್ರಮುಖ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಲಾಯಿತು.
ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯುತ್ತಿರುವ ರಸ್ತೆ ನಿರ್ಮಾಣ, ಉದ್ಯಾನವನಗಳ ಅಭಿವೃದ್ಧಿ, ವಿದ್ಯಾರ್ಥಿ ವಸತಿ ನಿಲಯಗಳ ಕಟ್ಟಡ ಕಾಮಗಾರಿ ಸೇರಿದಂತೆ ವಿವಿಧ ಯೋಜನೆಗಳ ಪ್ರಗತಿ ಹಾಗೂ ಕಾಮಗಾರಿಗಳ ಗುಣಮಟ್ಟದ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳಲಾಯಿತು.
ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು ರಾಯಚೂರು ಮತ್ತು ಯಾದಗಿರಿ ಸೇರಿದಂತೆ ಎರಡು ಜಿಲ್ಲೆಗಳ ಸಾವಿರಾರು ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಉತ್ತಮ ಅವಕಾಶಗಳನ್ನು ಕಲ್ಪಿಸುವ ಪ್ರಮುಖ ಶಿಕ್ಷಣ ಸಂಸ್ಥೆಯಾಗಿದೆ. ವಿಶ್ವವಿದ್ಯಾಲಯದಲ್ಲಿ ಅಗತ್ಯ ಮೂಲಸೌಕರ್ಯಗಳು ಅಭಿವೃದ್ಧಿಯಾದರೆ ವಿದ್ಯಾರ್ಥಿಗಳಿಗೆ ಉತ್ತಮ ಕಲಿಕಾ ವಾತಾವರಣ, ವಸತಿ ಹಾಗೂ ಅಗತ್ಯ ಸೌಲಭ್ಯಗಳು ದೊರೆಯಲಿವೆ.
ವಿದ್ಯಾರ್ಥಿಗಳ ಭವಿಷ್ಯಕ್ಕೆ ಪೂರಕವಾದ ಗುಣಮಟ್ಟದ ಶಿಕ್ಷಣದ ಜೊತೆಗೆ ಆಧುನಿಕ ಮೂಲಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ವಿಶ್ವವಿದ್ಯಾಲಯದ ಸಮಗ್ರ ಅಭಿವೃದ್ಧಿಗೆ ಅಗತ್ಯ ಸಹಕಾರ ನೀಡಲಾಗುವುದು ಎಂದು ತಿಳಿಸಲಾಯಿತು.

Previous articleಮಟಮಾರಿಯಲ್ಲಿ ₹3 ಕೋಟಿ ರಸ್ತೆ ಕಾಮಗಾರಿಗೆ ಭೂಮಿಪೂಜೆ; ಕುರ್ಡಿಯಲ್ಲಿ ₹25 ಲಕ್ಷದ ಸಮುದಾಯ ಭವನ ಉದ್ಘಾಟನೆ
Next article‘ಪ್ರೇರಣಾ’ – ವಿ. ಎಸ್. ಕಾಂತನವರ ಹಿಂದಿ ಕಾವ್ಯ ಸುಮಗುಚ್ಛ