ರಾಯಚೂರು

ದಲಿತರು, ಹಿಂದುಳಿದವರಿಗೆ ನ್ಯಾಯ ಕೊಡಲು ಸಾಧ್ಯವಾಗದಿದ್ದರೆ ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಿ: ವಿಜಯೇಂದ್ರ ಸವಾಲು

ಮಸ್ಕಿ (ರಾಯಚೂರು): ದಲಿತರು ಹಾಗೂ ಹಿಂದುಳಿದ ವರ್ಗಗಳಿಗೆ ನ್ಯಾಯ ಕೊಡಲು ಸಾಧ್ಯವಾಗದಿದ್ದರೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಲಿ. ಆಗ ಜನರೇ ತೀರ್ಮಾನ ಮಾಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸವಾಲು ಹಾಕಿದರು.

‘ಬಳ್ಳಾರಿ ಚಲೋ’ ಪಾದಯಾತ್ರೆ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಲಿತರ ಹೆಸರು ಹೇಳಿಕೊಂಡು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಕಳೆದ ಮೂರುವರೆ ವರ್ಷಗಳಿಂದ ದಲಿತರಿಗೆ ಅನ್ಯಾಯ ಮಾಡುತ್ತಲೇ ಬಂದಿದೆ ಎಂದು ಆರೋಪಿಸಿದರು.

ವಾಲ್ಮೀಕಿ ನಿಗಮದಲ್ಲಿ ₹187 ಕೋಟಿ ಹಗರಣ ನಡೆದಿದೆ. ಮೀಸಲಾತಿಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿಲ್ಲ. ಮೀಸಲಾತಿಯ ನೆಪ ಹೇಳಿಕೊಂಡು ಯುವಕರಿಗೆ ಉದ್ಯೋಗ ನೀಡಿಲ್ಲ. ಕೇವಲ ದಲಿತರು ಮಾತ್ರವಲ್ಲದೆ ಎಲ್ಲ ಸಮುದಾಯಗಳನ್ನೂ ಸರ್ಕಾರ ಸಂಪೂರ್ಣವಾಗಿ ನಿರ್ಲಕ್ಷಿಸಿದೆ. ಒಟ್ಟಾರೆ ಅಖಂಡ ಕರ್ನಾಟಕವನ್ನು ಕಡೆಗಣಿಸಿದೆ ಎಂದು ದೂರಿದರು.

ಇನ್ನೂ ಎರಡು-ಮೂರು ವಿಕೆಟ್ ಬೀಳಲಿವೆ

ಡಿಕೆಶಿ ಸರ್ಕಾರದ ಇನ್ನೂ ಎರಡು-ಮೂರು ವಿಕೆಟ್‌ಗಳು ಬೀಳಲು ಸಿದ್ಧವಾಗಿರುವಂತೆ ಕಾಣುತ್ತಿದೆ. ಭ್ರಷ್ಟಾಚಾರವೇ ಇವರೆಲ್ಲರಿಗೂ ಉರುಳಾಗಲಿದೆ ಎಂದು ವಿಜಯೇಂದ್ರ ಹೇಳಿದರು.

ಲಜ್ಜೆಗೆಟ್ಟ ಕಾಂಗ್ರೆಸ್‌ನವರಿಗೆ ಮಾನ, ಮರ್ಯಾದೆ ಯಾವುದೂ ಇಲ್ಲ. ‘ಆನೆ ನಡೆದಿದ್ದೇ ದಾರಿ’ ಎಂದುಕೊಂಡಿದ್ದವರ ವಿರುದ್ಧ ಬಿಜೆಪಿ ಬೀದಿಗಿಳಿದು ಹೋರಾಟ ಆರಂಭಿಸಿದೆ. ನಮ್ಮೊಂದಿಗೆ ರೈತರೂ ಪ್ರತಿಭಟನೆ ನಡೆಸುತ್ತಿದ್ದಾರೆ. ಅನ್ನದಾತರ ಸಮಸ್ಯೆಗಳನ್ನು ಆಲಿಸುವ ಕನಿಷ್ಠ ಸೌಜನ್ಯವನ್ನೂ ಮುಖ್ಯಮಂತ್ರಿ ತೋರುತ್ತಿಲ್ಲ ಎಂದು ಆರೋಪಿಸಿದರು.

ಈಗ ಕಾಟಾಚಾರದ ಬರ ವೀಕ್ಷಣೆ

ಬಿಜೆಪಿ ವತಿಯಿಂದ ರಾಜ್ಯದಲ್ಲಿ ಈಗಾಗಲೇ ಬರ ವೀಕ್ಷಣೆ ಮಾಡಲಾಗಿದೆ. ಈವರೆಗೆ ಬರಗಾಲ ಪರಿಶೀಲನೆಗೆ ತೆರಳದ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಈಗ ಬರ ವೀಕ್ಷಣೆ ಆರಂಭಿಸಿದ್ದಾರೆ. ಎ.ಸಿ. ಹಾಲ್‌ನಲ್ಲೇ ಕುಳಿತಿದ್ದವರು ಅನಿವಾರ್ಯವಾಗಿ ರೈತರ ಸಮಸ್ಯೆಗಳನ್ನು ಆಲಿಸಲು ಮುಂದಾಗಿದ್ದಾರೆ. ಬಿಜೆಪಿ ನಡೆಸುತ್ತಿರುವ ಹೋರಾಟವೇ ಇದಕ್ಕೆ ಕಾರಣ ಎಂದು ವಿಜಯೇಂದ್ರ ಹೇಳಿದರು.

‘ಇವರು ಕತ್ತೆ ಕಾಯುತ್ತಿದ್ದರೇ?’

ರಾಯಚೂರು ಭಾಗದ ಶಾಸಕರ ಸಭೆಯನ್ನು ಮುಖ್ಯಮಂತ್ರಿ ಕರೆದಿದ್ದಾರೆ. ಈ ಸಭೆ ರೈತರ ಸಮಸ್ಯೆಗಳನ್ನು ಅರಿಯಲು ಅಲ್ಲ; ಬದಲಿಗೆ ಬಿಜೆಪಿ ಅಧಿಕಾರದಲ್ಲಿದ್ದಾಗ ನಡೆದಿರುವ ಹಗರಣಗಳ ಬಗ್ಗೆ ಮಾಹಿತಿ ಪಡೆಯಲು ಎಂದು ಹೇಳಲಾಗುತ್ತಿದೆ. ಮೂರು ವರ್ಷಗಳಿಂದ ಅಧಿಕಾರದಲ್ಲಿದ್ದಾಗ ನೀವೇನು ಕತ್ತೆ ಕಾಯುತ್ತಿದ್ದಿರಾ ಎಂದು ಪ್ರಶ್ನಿಸಿದ ಅವರು, ಇಂತಹ ಬೆದರಿಕೆ, ಧಮ್ಕಿಗಳಿಗೆ ನಾವು ಹೆದರುವುದಿಲ್ಲ ಎಂದು ಸವಾಲು ಹಾಕಿದರು.

ಉತ್ತರ ಕರ್ನಾಟಕದಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿದೆ. ಸಾವಿರ ಅಡಿ ಕೊರೆದರೂ ನೀರು ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ. ಜಾನುವಾರುಗಳಿಗೆ ಮೇವು ಇಲ್ಲದಾಗಿದೆ. ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಇದೆ. ಆದರೆ ಮುಖ್ಯಮಂತ್ರಿ ಮಾತ್ರ ರಿಯಲ್ ಎಸ್ಟೇಟ್ ಮಾಡಿಕೊಂಡು ಬೆಂಗಳೂರಿನಲ್ಲಿ ಕುಳಿತಿದ್ದಾರೆ. ಅವರಿಗೆ ಬೆಂಗಳೂರೇ ಎಲ್ಲವೂ ಆಗಿದೆ ಎಂದು ಟೀಕಿಸಿದರು.

ಸರ್ಕಾರ ತನ್ನ ನಿರ್ಲಜ್ಜ ಧೋರಣೆಯನ್ನು ಬದಲಿಸಿಕೊಳ್ಳದಿದ್ದರೆ ಜನರೇ ಈ ಸರ್ಕಾರವನ್ನು ಬಡಿಗೆ ಹಿಡಿದು ಓಡಿಸಲಿದ್ದಾರೆ ಎಂದು ವಿಜಯೇಂದ್ರ ಎಚ್ಚರಿಸಿದರು.

‘ಎಲ್ಲದಕ್ಕೂ ಲಂಚ ಕೊಡಬೇಕು’

ಈ ಸರ್ಕಾರದಲ್ಲಿ ಎಲ್ಲದಕ್ಕೂ ಲಂಚ ಕೊಡಬೇಕಾಗಿದೆ. ಲಂಚ ನೀಡದೆ ಯಾವುದೇ ಕೆಲಸವಾಗುವುದಿಲ್ಲ ಎಂಬುದು ವಾಸ್ತವಿಕ ಸತ್ಯ ಎಂದು ವಿಜಯೇಂದ್ರ ಆರೋಪಿಸಿದರು.

ಸದ್ಯ ಸರ್ಕಾರ ಕೇವಲ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ. ಇನ್ನೂ ಹಲವು ತಾಲೂಕುಗಳು ಬರಪೀಡಿತವಾಗಿವೆ. ಅವುಗಳನ್ನೂ ಬರಪೀಡಿತ ತಾಲೂಕುಗಳೆಂದು ಘೋಷಿಸಲು ರೈತರು ಲಂಚ ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ವ್ಯಂಗ್ಯವಾಡಿದರು.

projectededore

Recent Posts

ತಹಸೀಲ್ದಾರ್ ಕಾರ್ಯಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಸಿರವಾರ: ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಪಟ್ಟಣದ ತಹಸಿಲ್ದಾರ್ ಕಾರ್ಯಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣನ…

4 hours ago

ಬಳ್ಳಾರಿ ಚಲೋ ತೋರ್ಪಡಿಕೆಗಾಗಿ ನಡೆಸಿದ ಪಾದಯಾತ್ರೆ: ಎನ್‌.ಎಸ್‌.ಬೋಸರಾಜು ಟೀಕೆ

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್ ಅವರು ತಮ್ಮ ಅಸ್ತಿತ್ವ ತೋರಿಸಿಕೊಳ್ಳಲು ‘ಬಳ್ಳಾರಿ ಚಲೋ’…

4 hours ago

ಅತ್ಯಾಚಾರ ಸಂತ್ರಸ್ತೆ ಅಶ್ವಿನಿ ಕುಟುಂಬಕ್ಕೆ ಸಚಿವ ಮುನಿಯಪ್ಪ ಸಾಂತ್ವನ: ಆರೋಪಿಗಳಿಗೆ ಕಠಿಣ ಶಿಕ್ಷೆಯ ಭರವಸೆ

​ಸಿರವಾರ: ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ ಇತ್ತೀಚೆಗೆ ನಡೆದ ದೌರ್ಜನ್ಯ ಹಾಗೂ ಅತ್ಯಾಚಾರಕ್ಕೆ ಬಲಿಯಾದ ಅಶ್ವಿನಿ ಅವರ ನಿವಾಸಕ್ಕೆ ಸಮಾಜ ಕಲ್ಯಾಣ…

4 hours ago

ಸಿರವಾರ ಬಿಜೆಪಿ ಮುಖಂಡರಿಂದ ‘ಬಳ್ಳಾರಿ ಚಲೋ’ ಪಾದಯಾತ್ರೆಗೆ ಬೆಂಬಲ: ಸಿಂಧನೂರಿನಿಂದ ಕಾರಟಗಿಯತ್ತ ಸಾಗಿದ ಬೃಹತ್ ಜಾಥಾ

ಸಿರವಾರ: ಕಾಂಗ್ರೆಸ್ ಸರ್ಕಾರದ ಸಾಲು ಸಾಲು ಭ್ರಷ್ಟಾಚಾರ, ಸಚಿವರ ಹಗರಣಗಳು ಹಾಗೂ ಬರಪೀಡಿತ ತಾಲೂಕುಗಳಿಗೆ ಪರಿಹಾರ ವಿತರಿಸುವಲ್ಲಿ ಅನುಸರಿಸುತ್ತಿರುವ ವಿಳಂಬ…

5 hours ago

ಶ್ರೀರಾಮುಲು ಹೇಳಿಕೆ ವಿರುದ್ಧ ಪ್ರದೀಪ್ ಈಶ್ವರ್ ಕಿಡಿ: ‘ರಾಹುಲ್ ಗಾಂಧಿ ಬಗ್ಗೆ ಏಕವಚನದಲ್ಲಿ ಮಾತನಾಡಿದರೆ ಸುಮ್ಮನಿರಲ್ಲ’

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಬಿಜೆಪಿ ಮುಖಂಡ ಶ್ರೀರಾಮುಲು ಏಕವಚನದಲ್ಲಿ ಉಲ್ಲೇಖಿಸುತ್ತಿರುವುದಕ್ಕೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್…

9 hours ago

ಮಂತ್ರಾಲಯದ ರಾಯರ ದರ್ಶನ ಪಡೆದ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ

ಸಿರವಾರ : ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವದ ನಿಮಿತ್ತ ಜೆಡಿಎಸ್ ನ ಜನಪ್ರಿಯ ನಾಯಕರು ಹಾಗೂ…

9 hours ago