ರಾಯಚೂರು: ಜನರ ಬಳಿಗೆ ಆಡಳಿತವನ್ನು ಕೊಂಡೊಯ್ದು, ಜನರ ಸಮಸ್ಯೆಗಳಿಗೆ ತ್ವರಿತವಾಗಿ ಪರಿಹಾರ ಒದಗಿಸುವ ಉದ್ದೇಶದಿಂದ ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಯಾಪಲದಿನ್ನಿ ಗ್ರಾಮದಲ್ಲಿ ‘ಪ್ರಜಾಸೇವಾ–ಸೇವೆ’ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಜನಪ್ರಿಯ ಶಾಸಕ ಬಸನಗೌಡ ದದ್ದಲ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು. ಗ್ರಾಮಸ್ಥರು ತಮ್ಮ ಸಮಸ್ಯೆಗಳು ಹಾಗೂ ಬೇಡಿಕೆಗಳನ್ನು ಅಧಿಕಾರಿಗಳು ಮತ್ತು ಶಾಸಕರಿಗೆ ನೇರವಾಗಿ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಒಟ್ಟು 475 ಅರ್ಜಿಗಳು ಸ್ವೀಕೃತವಾಗಿದ್ದು, 423 ಅರ್ಜಿಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಿ ವಿಲೇವಾರಿ ಮಾಡಲಾಯಿತು. ಉಳಿದ 52 ಅರ್ಜಿಗಳು ಬಾಕಿ ಉಳಿದಿದ್ದು, ಸಂಬಂಧಿಸಿದ ಇಲಾಖೆಗಳ ಮೂಲಕ ತ್ವರಿತವಾಗಿ ಪರಿಶೀಲಿಸಿ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.
ಸ್ಥಳದಲ್ಲಿಯೇ ಪರಿಹರಿಸಲಾದ ಅರ್ಜಿಗಳಲ್ಲಿ ವಿವಿಧ ಗ್ಯಾರಂಟಿ ಯೋಜನೆಗಳ ಸೌಲಭ್ಯ, ಕಾರ್ಮಿಕರ ಕಾರ್ಡ್, ವೃದ್ಧಾಪ್ಯ ಪಿಂಚಣಿ, ಆರೋಗ್ಯ ಕಾರ್ಡ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ (RWS), ಜೆಸ್ಕಾಂ, ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಮಸ್ಯೆಗಳು ಹಾಗೂ ಬೇಡಿಕೆಗಳು ಒಳಗೊಂಡಿದ್ದವು.
ಜನರ ಸಮಸ್ಯೆಗಳನ್ನು ನೇರವಾಗಿ ಆಲಿಸಿದ ಶಾಸಕ ಬಸನಗೌಡ ದದ್ದಲ್, ಸರ್ಕಾರದ ಯೋಜನೆಗಳು ಮತ್ತು ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ಯಾವುದೇ ವಿಳಂಬವಾಗದಂತೆ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ DSP ಶಾಂತವೀರ, ತಹಶೀಲ್ದಾರ್ ಸುರೇಶ ವರ್ಮ, EO ಚಂದ್ರಶೇಖರ ಪವಾರ, BEO ಈರಣ್ಣ ಕೋಸಗಿ, ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಪಕ್ಷದ ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Previous articleಸಾರ್ವಜನಿಕರ ಕುಂದುಕೊರತೆಗಳನ್ನು ಸ್ಥಳದಲ್ಲೇ ಆಲಿಸಿ ತ್ವರಿತ ಪರಿಹಾರ: ಸಚಿವ ಡಾ. ಅಜಯ್ ಧರ್ಮಸಿಂಗ್
Next articleಮುಚ್ಚಳಗುಡ್ಡ ಕ್ಯಾಂಪಿನಲ್ಲಿ ಮರಡಿ ಆಂಜನೇಯ ಸ್ವಾಮಿ ಜಾತ್ರಾ ಮಹೋತ್ಸವ ಸಂಭ್ರಮ