ಮಾನ್ವಿ: 71ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ನ.23ರಂದು ಪಟ್ಟಣದ ಟಿ.ಎ.ಪಿ.ಸಿ.ಎಂ.ಎಸ್. ಆವರಣದಲ್ಲಿ ಯುವ ಸಂಭ್ರಮ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ವಿಜಯ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಕಾರ್ಯಾಧ್ಯಕ್ಷ ಆನಂದ ಸ್ವಾಮಿ ಹಿರೇಮಠ ತಿಳಿಸಿದರು.
ಪಟ್ಟಣದ ಪತ್ರಿಕಾ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಖಾಸಗಿ ಕಾಲೇಜುಗಳ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ನ.23ರಂದು ಸಂಜೆ 5.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಈ ಸಂದರ್ಭದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ವೀರ ಹನುಮಾನ್, ಈರಣ್ಣ ರುದ್ರಾಕ್ಷಿ ಹಾಗೂ ಕಾರುಣ್ಯಾಶ್ರಮಕ್ಕೆ ಭೂದಾನ ಮಾಡಿದ ಉಮಾದೇವಿ ಮತ್ತು ವೀರೇಶ ಹೀರಾ ಅವರನ್ನು ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಈ ಬಾರಿಯ ಕನ್ನಡ ಕಣ್ಮಣಿ ಪ್ರಶಸ್ತಿಗೆ ಆಯ್ಕೆಯಾದ ಚುಕ್ಕಿ ಸೂಗಪ್ಪಗೌಡ್ರು, ಡಾ. ರಮ್ಯಾ ವೀರವಲ್ಲಿ, ಮೌನೇಶ್ ಪೋತ್ನಾಳ್, ಚಲನಚಿತ್ರ ನಟಿ ಕಾವ್ಯಾಂಜಲಿ, ಮಹೇಂದ್ರ ಕುರ್ಡಿ, ಗುರುದೇವರಮನಿ, ಶಕುಂತಲಾ, ದೇವರಾಜ ಯಾಲಿ, ಅಮರೇಶ ಮಾಡಗಿರಿ, ವಿಷ್ಣು ನಾರಾಯಣ ದೇಸಾಯಿ, ಅಮರಯ್ಯಸ್ವಾಮಿ ಹಿರೇಮಠ, ಅಮರೇಶಸ್ವಾಮಿ ಯಡಿವಾಳ ಹಾಗೂ ರತ್ನಾ ಹಾದಿಮನಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜೂನಿಯರ್ ರಾಜಕುಮಾರ್, ಜೂನಿಯರ್ ವಿಷ್ಣುವರ್ಧನ್ ಸೇರಿದಂತೆ ಹಾಸ್ಯ ಕಲಾವಿದರಿಂದ ಮನರಂಜನಾ ಕಾರ್ಯಕ್ರಮಗಳು ಹಾಗೂ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ತಾಲೂಕಿನ ಗಣ್ಯರು ಹಾಗೂ ಜನಪ್ರತಿನಿಧಿಗಳು ಭಾಗವಹಿಸಲಿದ್ದು, ಕನ್ನಡ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಆನಂದಸ್ವಾಮಿ, ಕೆ. ಶಿವಕುಮಾರ, ಚನ್ನಬಸವನಗೌಡ ಗವಿಗಟ್ಟ, ಶೇಖರಗೌಡ ಮಾಲಿಪಾಟೀಲ್, ಸಿದ್ದನಗೌಡ ಗೋನವಾರ, ಮನೋಹರ ಆಚಾರಿ, ಆಪ್ರಧ್ ಹಾಗೂ ಅಂಬ್ರೇಶ್ ಮುಸ್ಟೂರ್ ಉಪಸ್ಥಿತರಿದ್ದರು.
ಗದಗ: ಭಾರತೀಯ ಜನತಾ ಯುವ ಮೋರ್ಚಾ ಗದಗ ಜಿಲ್ಲಾ ಘಟಕದ ವತಿಯಿಂದ ವಿದ್ಯಾರ್ಥಿಗಳಿಗಾಗಿ ‘ಪ್ರಜಾಪ್ರಭುತ್ವ, ಅರಾಜಕತೆಯಲ್ಲ’ (Democracy, Not Anarchy)…
ಮಂತ್ರಾಲಯ: ಉತ್ತಾನ ದ್ವಾದಶಿಯ ಪವಿತ್ರ ಸಂದರ್ಭದಲ್ಲಿ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ತುಳಸಿ–ದಾಮೋದರ ವಿವಾಹ ಮಹೋತ್ಸವವನ್ನು ಭಕ್ತಿಭಾವ ಮತ್ತು…
ಸಿರವಾರ: "ನಮ್ಮ ಮಕ್ಕಳು ಓದಿನಿಂದ ದೂರವಾದರೆ, ಸಮಾಜ ಮುಂದೆ ಹೋಗಲು ಸಾಧ್ಯವಿಲ್ಲ. ಪ್ರತಿಯೊಬ್ಬ ಪೋಷಕರು ತಮ್ಮ ಮಗುವಿಗೆ ಶಿಕ್ಷಣ ಕೊಡಿಸುವುದೇ…
ಮಾನ್ವಿ: ಡಿಸ್ಟ್ರಿಬ್ಯೂಟರ್ 82ರ ಕೆಳಭಾಗದ ರೈತರ ಜಮೀನುಗಳಿಗೆ ಸಮರ್ಪಕವಾಗಿ ನೀರು ಹರಿಸಬೇಕು. ಇಲ್ಲದಿದ್ದರೆ ಸುಮಾರು 3 ಸಾವಿರ ಎಕರೆ ಪ್ರದೇಶದಲ್ಲಿ…
ಶಹಾಪುರ: ರೈತರ ಬೆಳೆಗಳು ಒಣಗುತ್ತಿದ್ದರೂ ಶಾಸಕರಿಗೆ ಕಾಳಜಿಯಿಲ್ಲ. ಏಳು ಶಾಸಕರು ಒಗ್ಗಟ್ಟಿನಿಂದ ಮನಸ್ಸು ಮಾಡಿದರೆ ಕ್ಷಣಾರ್ಧದಲ್ಲಿ ಕಾಲುವೆಗಳಿಗೆ ನೀರು ಬಿಡುಗಡೆ…
ಮಾನ್ವಿ:ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಮುಖ್ಯಮಂತ್ರಿ ನೇಗಿಲುಯೋಗಿ ಯೋಜನೆಯಡಿ ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ಕೃಷಿ ಯಂತ್ರೋಪಕರಣಗಳ ಸೇವೆಯನ್ನು ರೈತರಿಗೆ ಸುಲಭವಾಗಿ ಮತ್ತು…